Back to Top
Gopala dasa kannada keerthane Screenshot 0
Gopala dasa kannada keerthane Screenshot 1
Gopala dasa kannada keerthane Screenshot 2
Gopala dasa kannada keerthane Screenshot 3
Free website generator for mobile apps; privacy policy, app-ads.txt support and more... AppPage.net

About Gopala dasa kannada keerthane

ಗೋಪಾಲ (ಭಾಗಣ್ಣ) ದಾಸರ ಕೀರ್ತನೆ ಸಂಗ್ರಹ
ಗೋಪಾಲದಾಸರು - ಕನ್ನಡ ನಾಡಿನ ಹರಿದಾಸರಲ್ಲಿ ಅಗ್ರಗಣ್ಯರು.
ವಿಜಯ ದಾಸರ ಶಿಷ್ಯರು ಮತ್ತು ಭಕ್ತಿಯಲ್ಲಿ ಭಾಗಣ್ಣ ಎಂಬ ಸ್ತುತಿಗೆ ಪಾತ್ರರಾದವರು ಗೋಪಾಲದಾಸರು.
ಶ್ರೀ ರಾಘವೇಂದ್ರಸ್ವಾಮಿಗಳ ಪ್ರೇರಣೆಯಿಂದ ಶ್ರೀ ವಿಜಯದಾಸರು, ಶ್ರೀ ಗೋಪಾಲದಾಸರು, ಶ್ರೀ ಜಗನ್ನಾಥದಾಸರು ಮುಂತಾದವರು ದಾಸ ಸಾಹಿತ್ಯದ ಮರುಹುಟ್ಟಿಗೆ ಕಾರಣರಾದರು.
ಪುರಂದರ ದಾಸ, ವಿಜಯದಾಸ, ಗೋಪಾಲದಾಸ ಮತ್ತು ಜಗನ್ನಾಥದಾಸರುಗಳನ್ನು ಒಟ್ಟಿಗೆ ದಾಸ ಚತುಷ್ಟಯರೆಂದು ಕರೆಯುತ್ತಾರೆ.
ಹೀಗೆ ರಾಯರ ಪ್ರಭಾವದಿಂದ ಪ್ರಸಿದ್ಧಿ ಪಡೆದ ವಿಜಯದಾಸರ ಪ್ರಮುಖ ಶಿಷ್ಯರು ಶ್ರೀ ಗೋಪಾಲದಾಸರು.
ಇವರ ತಂದೆ ತಾಯಿ ಇವರಿಗೆ ಇಟ್ಟ ಹೆಸರೆಂದರೆ ಭಾಗಣ್ಣ.
ಭಾಗಣ್ಣ ಗಾಯತ್ರಿ ಮಂತ್ರ ಸಾಧನೆ ಮಾಡಿ ಜನರಿಗೆ ಭವಿಷ್ಯ ಹೇಳಿ ತನ್ನ ಜೀವನ ಸಾಗಿಸುತ್ತಿದ್ದರು .
ಆ ಕಾಲದಲ್ಲಿ ಅವರು ವೆಂಕಟಕೃಷ್ಣ ಎಂಬ ಅಂಕಿತದಿಂದ ಪದಗಳನ್ನು ರಚಿಸಿ ಹಾಡುತ್ತಿದ್ದರು.
ಆಗ ವೆಂಕಟೇಶನ ಭಕ್ತರೂ ಹಾಗೂ ಪುರಂದರದಾಸರ ಶಿಷ್ಯರೂ ಆದ ವಿಜಯದಾಸರು ಭಾಗಣ್ಣನನ್ನು ಭೇಟಿಯಾದರು.
ಅವರಿಂದ ‘ಗೋಪಾಲವಿಠಲ’ ಎಂಬ ಅಂಕಿತವನ್ನು ಪಡೆದು ಭಾಗಣ್ಣ ಅಂದಿನಿಂದ ಗೋಪಾಲದಾಸರೆಂಬ ಹೆಸರಿಗೆ ಪಾತ್ರರಾದರು.
ಪುಷ್ಯ ಬಹುಳ ಅಷ್ಟಮಿ ಉತ್ತನೂರಿನ ಶ್ರೀ ಗೋಪಾಲದಾಸರ ಆರಾಧನ.
(ಕಾಲ ೧೭೨೨ - ೧೭೬೨) ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮೊಸರಕಲ್ಲು ಎಂಬ ಗ್ರಾಮದಲ್ಲಿ ಜನಿಸಿದ ಗೋಪಾಲದಾಸರು,
ಇವರು ಉತ್ತನೂರಿನಲ್ಲಿ ಪುಷ್ಯ ಬಹುಳ ಸಪ್ತಮಿಯಂದು ತಮ್ಮ ಕೊನೆಯುಸಿರೆಳೆದರು.
ಉತ್ತನೂರು ಗೋಪಾಲದಾಸರ ಬೃಂದಾವನ ಇರುವ ಸ್ಥಳ.
ತಮ್ಮ ಜೀವನಕ್ಕಾಗಿ ಬಹಳ ಬಡತನದಲ್ಲೇ ಕಾಲ ಕಳೆಯುತ್ತಿದ್ದರು.
ಈತ ಹುಟ್ಟಿದ ಕೆಲವು ವರ್ಷಗಳಲ್ಲಿ ತಂದೆ ಮುರಾರಿರಾಯ ಕಾಲವಾದುದರಿಂದ
ಈತನ ತಾಯಿ ವೆಂಕಮ್ಮ ತನ್ನ ನಾಲ್ವರು ಗಂಡುಮಕ್ಕಳೊಂದಿಗೆ ದಿಕ್ಕಿಲ್ಲದೆ ಸಂಕಾಪುರಕ್ಕೆ ಬಂದು
ಅಲ್ಲಿನ ಊರ ಹೊರಗಿದ್ದ ಮಾರುತಿ ದೇವಾಲಯದಲ್ಲಿ ಆಶ್ರಯ ಪಡೆದಳು.
ಗೋಪಾಲದಾಸರು ಗಾಯತ್ರೀ ಮಂತ್ರ ಧ್ಯಾನದಿಂದ ಅಪೂರ್ವ ಸಿದ್ಧಿಯನ್ನು ಪಡೆದು ಭವಿಷ್ಯ ಹೇಳುವುದರಲ್ಲಿ ನಿಷ್ಣಾತನಾದರು.
ಜ್ಯೋತಿಷ್ಯವನ್ನು ಬಹಳ ಚೆನ್ನಾಗಿ ತಿಳಿದಿದ್ದ ಇವರ ಶಕ್ತಿ ಎಷ್ಟಿತ್ತೆಂದರೆ ಯಾರದೇ ಜ್ಯೋತಿಷ್ಯವನ್ನು ಅವರ ಹಿಂದಿನ ಮೂರು ಜನ್ಮದ ವೃತ್ತಾಂತವನ್ನು ಹೇಳುವಷ್ಟು ಸಾಮರ್ಥ್ಯವಿತ್ತು.
ಮಗನ ಈ ಏಳಿಗೆಯಿಂದ ವೆಂಕಮ್ಮನ ಕಷ್ಟಗಳು ಕ್ರಮಕ್ರಮವಾಗಿ ಕಡಿಮೆಯಾಯಿತಾಗಿ ಆಕೆ ಮಕ್ಕಳೊಂದಿಗೆ ಊರ ಹೊರಗಿನ ಮಾರುತಿ ದೇವಾಲಯದಿಂದ, ಉತ್ತನೂರಿಗೆ ಬಂದು ನೆಲೆಸಿದಳು.
ಅಲ್ಲಿನ ವೆಂಕಟೇಶನ ಗುಡಿಯೆ ಗೋಪಾಲದಾಸರ ಕಾರ್ಯಕ್ಷೇತ್ರವಾಯಿತು.
ಶ್ರೀ ಶ್ರೀನಿವಾಸಾಚಾರ್ಯರಿಗೆ (ಜಗನ್ನಾಥದಾಸರಿಗೆ), ಅವರ ಜೀವಿತದ ೪೦ ವರ್ಷಗಳ ಆಯಸ್ಸನ್ನು ಶ್ರೀ ವಿಜಯರಾಯರ ಅಪ್ಪಣೆಯಂತೆ ದಾನವಾಗಿ ನೀಡಿದ ಮಹಾನುಭಾವರು ಶ್ರೀ ಗೋಪಾಲದಾಸರು.
ಒಮ್ಮೆ ಇವರು ತಮ್ಮ ಶಿಷ್ಯರಿಗೆ ಮಧ್ಯರಾತ್ರಿ ತಮ್ಮ ತಪೋಬಲಪ್ರಭಾವದಿಂದ ಸೂರ್ಯನನ್ನು ದರ್ಶನ ಮಾಡಿಸಿದ್ದರು.
ಗೋಪಾಲದಾಸರು ತನ್ನ ತಮ್ಮಂದಿರೊಂದಿಗೆ ಕೂಡಿ ಆಶುಕವಿತೆಯಲ್ಲಿ ಜಯಪ್ರದನಾಗಿ ಉತ್ತರಾದಿ ಮಠದ ಶ್ರೀಗಳವರಾದ ಸತ್ಯಭೋಧತೀರ್ಥರ ಅನುಗ್ರಹವನ್ನು ಸಂಪಾದಿಸಿದ ಘಟನೆ ಉಲ್ಲೇಖನಾರ್ಹವಾದುದು.
ಐಜಿ ವೆಂಕಟರಾಮಾಚಾರ್ಯ ಮತ್ತು ಹೆಳವನಕಟ್ಟೆ ಗಿರಿಯಮ್ಮ ಮೊದಲಾದವರು ಗೋಪಾಲದಾಸರ ಶಿಷ್ಯವರ್ಗಕ್ಕೆ ಸೇರಿದವರಲ್ಲಿ ಪ್ರಮುಖರು.
ಗೋಪಾಲದಾಸರು ಕೀರ್ತನಕಾರನಾಗಿದ್ದದ್ದಂತೆಯೇ ಕುಶಲಿಯಾದ ಚಿತ್ರಕಾರರು ಆಗಿದ್ದರು.
ಗೋಪಾಲದಾಸರ ಲಭ್ಯ ಸಾಹಿತ್ಯ : ೯೬ ಕೀರ್ತನೆಗಳು,೨೧ ಉಗಾಭೋಗಗಳು,೭೦ ಸುಳಾದಿಗಳು.

ಗೋಪಾಲದಾಸರ ಕೀರ್ತನ whatsapp status ಗೆ ಅಥವಾ facebok story ಗೆ ಅಥವಾ ಸ್ನೇಹಿತರಿಗೆ ಅಥವಾ email ಮೂಲಕ share ಮಾಡುವ ಅವಕಾಶವನ್ನು ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಮಾಡುವ ಮೂಲಕ ಪ್ರೋತ್ಸಾಹಿಸಿ.
ಯಾವುದೇ ಸಮಸ್ಯೆಗೆ https://vishaya.in website ಮೂಲಕ ಹಾಗೂ [email protected] ಮೂಲಕ ಸಂಪರ್ಕಿಸಿ.

For any issues/concerns/feedback please reach out to us [email protected] OR through contact form in https://vishaya.in

Similar Apps

Kannada Shobane Songs

Kannada Shobane Songs

0.0

Shobane is a Carnatic language song. Shobane is a song sung by...

Kannada Odapugalu - ಒಡಪುಗಳು

Kannada Odapugalu - ಒಡಪುಗಳು

0.0

ಒಡಪುಗಳನ್ನು ಉತ್ತರ ಕರ್ನಾಟಕದ ವಿಶಿಷ್ಟ ಸಂಪ್ರದಾಯವೆಂದೇ ಹೇಳಬಹುದು. ಇದೊಂದು ಪಕ್ಕಾ ಉತ್ತರ ಕರ್ನಾಟಕ ಸೀಮೆಯ...

Kannada Actors Address Book

Kannada Actors Address Book

0.0

ಅಭಿಮಾನಿ ದೇವರುಗಳು ತಮ್ಮ ನೆಚ್ಚಿನ ಆರಾಧ್ಯ ಚಲನಚಿತ್ರ ನಟ, ನಟಿ, ನಿರ್ದೇಶಕರು, ನಿರ್ಮಾಪಕರು, ಸಂಗೀತ ನಿರ್ದೇಶಕರು...

Kannada Movie Name Guess

Kannada Movie Name Guess

0.0

A simple puzzle game. Identify the kannada film name from emoji. Can...

Karnataka Chief Ministers

Karnataka Chief Ministers

0.0

ಕರ್ನಾಟಕದ ಮುಖ್ಯಮಂತ್ರಿಗಳು ಕರ್ನಾಟಕದ ವಿದ್ಯಾವಂತ ಪ್ರಜೆಗಳು ಕರ್ನಾಟಕದ ಬಗೆಗಿನ ಸಾಮಾನ್ಯ ಮಾಹಿತಿಗಳಾದ ಇತಿಹಾಸ, ಆಡಳಿತ, ಸರ್ಕಾರ,...

ಶ್ರೀ ಭಗವದ್ಗೀತೆ ಶ್ಲೋಕ ಅರ್ಥಸಹಿತ

ಶ್ರೀ ಭಗವದ್ಗೀತೆ ಶ್ಲೋಕ ಅರ್ಥಸಹಿತ

0.0

The primary purpose of the Bhagavad Gita is to illuminate for all...

Frequently Asked Questions(FAQ)

ಗೋಪಾಲ ದಾಸರು ಯಾವ ಭಾಗೀರಥರಲ್ಲಿ ಅಗ್ರಗಣ್ಯರು?

ಗೋಪಾಲದಾಸರು ಕನ್ನಡ ನಾಡಿನ ಹರಿದಾಸರಲ್ಲಿ ಅಗ್ರಗಣ್ಯರು.

ಗೋಪಾಲದಾಸರು ಯಾರ ಶಿಷ್ಯರು?

ಗೋಪಾಲದಾಸರು ವಿಜಯದಾಸರ ಶಿಷ್ಯರು ಮತ್ತು ಭಾಗಣ್ಣ ಎಂಬ ಸ್ತುತಿಗೆ ಪಾತ್ರರಾದವರು.